View In English

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ


ಏಕೀಕೃತ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್.‌ಎಸ್‌.‌ಪಿ) ವನ್ನು ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ಯೋಜನೆಗಳ ಅಡಿಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಇ-ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (1 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತಿಯಿರುವ ವಿದ್ಯಾರ್ಥಿಗಳಿಗೆ ಅನ್ವಯ)


  • ವಿದ್ಯಾರ್ಥಿವೇತನ ವಿತರಿಸುವ ಇಲಾಖೆಗಳು:

    1. ಸಮಾಜ ಕಲ್ಯಾಣ ಇಲಾಖೆ
    2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
    3. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ
    4. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ವಿದ್ಯಾರ್ಥಿಗಳ ಶೈಕ್ಷಣಿಕ ವಿವರಗಳನ್ನು ಪಡೆಯಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ SATS ID (ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ) ಯನ್ನು ಮಾತ್ರ ತಂತ್ರಾಂಶವು ಬಳಸುತ್ತದೆ. ಅಲ್ಲದೇ ಈ ತಂತ್ರಾಂಶದಲ್ಲಿ ಆನ್ ಲೈನ್ ಮುಖಾಂತರ ಜಾತಿ, ಆದಾಯ ಮತ್ತು ಜಾತಿ/ಧಾರ್ಮ ಪರಿಶೀಲನೆ ಮಾಡಲು ಅಟಲ್ ಜೀ ಜನಸ್ನೇಹಿ ಕೇಂದ್ರ (AJSK) ದತ್ತಾಂಶದೊಂದಿಗೆ ಸಂಯೋಜಿಸಲಾಗಿದೆ. ವಿದ್ಯಾರ್ಥಿಯ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ವಿವರಗಳನ್ನು NPCI ನಿಂದ ಪಡೆದು, ಆ ಖಾತೆಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುತ್ತದೆ.

ಸಹಾಯವಾಣಿ


ಸಮಾಜ ಕಲ್ಯಾಣ ಇಲಾಖೆ

9008400010 / 9008400078

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

080-22261789

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

080-22535931

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

080-22374836 / 8050770005